ಬೆಂಗಳೂರು-ಜಿಲ್ಲಾಡಳಿತ ಭವನದಲ್ಲಿ ಬುಧವಾರ ಬರ ನಿರ್ವಹಣೆ ಕುರಿತ ಸಭೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಪ್ರೀಯಾಂಕ ಖರ್ಗೆ ಮುಂದಿನ ಎರಡು ಮೂರು ತಿಂಗಳ ಅವಧಿಯಲ್ಲಿ ಜನಸಾಮಾನ್ಯರಿಗೆ ಜಾನುವಾರುಗಳಿಗೆ ನೀರು, ಮೇವಿನ ಸಮಸ್ಯೆ ತಲೆದೂರಿದಲ್ಲಿ ಸಮರ್ಪಕವಾಗಿ ಅಧಿಕಾರಿಗಳು ನಿರ್ವಹಣೆ ಮಾಡಬೇಕು. ಜನಸಾಮಾನ್ಯರ ಅಹವಾಲುಗಳಿಗೆ ಸಹಾನುಭೂತಿಯಿಂದ ಸ್ಪಂದಿಸಬೇಕು ಎಂದು ಸೂಚಿಸಿದರು.
ಬರ ನಿರ್ವಹಣೆ ಕುರಿತಂತೆ ಈಗಾಗಲೇ ಮಾರ್ಗಸೂಚಿಗಳನ್ನು ಸರ್ಕಾರದಿಂದ ಹೊರಡಿಸಲಾಗಿದೆ ಅಲ್ಲದೇ ಮುಖ್ಯಮಂತ್ರಿಗಳು , ಕಂದಾಯ ಸಚಿವರು, ತೋಟಗಾರಿಕೆ ಸಚಿವರು , ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರುಗಳು ಸೇರಿದಂತೆ ಸರ್ಕಾರದ ಎಲ್ಲ ಸಚಿವರು ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿ ಬರ ನಿರ್ವಹಣೆ ಕುರಿತಂತೆ ಸೂಚನೆಗಳನ್ನು ನೀಡಿದ್ದಾರೆ.
ಬರ ನಿರ್ವಹಣೆಗಾಗಿ ಅನುದಾನವನ್ನು ಸಹ ಒದಗಿಸಿದ್ದು ತಾಲೂಕಾ ಹಂತದಲ್ಲಿ ಟಾಸ್ಕ್ ಫೋರ್ಸ ಸಮಿತಿ ಸಭೆಗಳನ್ನು ನಡೆಸಿ ಕಾಮಗಾರಿಗಳನು ಕೈಗೊಳ್ಳುವಂತೆ ಹೇಳಿದರು.ಸಭೆಯಲ್ಲಿ ತೆರಿಗೆ ಸಂಗ್ರಹ, ಕೂಸಿನ ಮನೆ ಕಾಮಗಾರಿ, ನರೇಗಾ ಕಾಮಗಾರಿ, ಗ್ರಂಥಾಲಯಗಳ ಸೌಲಭ್ಯ , ಹಾಸ್ಟೆ ಲ್ ಗಳಿಗೆ ಕುಡಿಯುವ ನೀರು ಪೂರೈಕೆ ಕುರಿತಂತೆ ಚರ್ಚಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಬಿ. ದೇವರಮನಿ, ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್.ಆರ್.ಗೌಡ ಸೇರಿದಂತೆ ಹಲವಾರು ಉಪಸ್ಥಿತರಿದ್ದರು