ಕಾಂಗ್ರೆಸ್‌ ಸೇರ್ಪಡೆ ಆದ ದಲಿತಪರ ನಾಯಕರು

ಮಂಗಳವಾರ, 21 ಮಾರ್ಚ್ 2023 (20:09 IST)
ದಲಿತ ಸಮುದಾಯದ ಪರ ಹೋರಾಟದಲ್ಲಿ ತೊಡಗಿರುವ ನಾಲ್ಕು ಪ್ರಮುಖ ನಾಯಕರು ಇಂದು  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ನಗರದ  ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ  ಸಮಾರಂಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ನೇತೃತ್ವದಲ್ಲಿ ನಾಯಕ ಸುದಾಂ ದಾಸ್, ಡಾ. ಗೋಪಾಲ್, ಅಂಬಣ್ಣ, ಹೆಣ್ಣೂರು ಶ್ರೀನಿವಾಸ್ ಕಾಂಗ್ರೆಸ್‌ ಗೆ ಸೇರ್ಪಡೆ ಆದರು .ನಂತರ ಮಾತನಾಡಿದ ಸುರ್ಜೆವಾಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳುವ ಕಾರ್ಯವನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಇವರ ಹಕ್ಕಿಗಾಗಿ ನಾವು ನಿರಂತರವಾಗಿ ಹೋರಾಡುತ್ತಾ ಬಂದಿದ್ದೇವೆ. ಆದರೆ ಬಸವರಾಜ್ ಬೊಮ್ಮಾಯಿ ನೇತ್ರತ್ವದ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನ್ಯಾಯ ಒದಗಿಸುವಲ್ಲಿ ಮಾಡಿರುವ ವೈಫಲ್ಯವನ್ನು ನಾವು ಖಂಡಿಸುತ್ತಿದ್ದೇವೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ