ರಾಜ್ಯದೆಲ್ಲೆಡೆ ಶೋಕಾಚರಣೆ ಘೋಷಿಸಿದ್ದರೂ ಸಮಾಜ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ ಆಯೋಜನೆ

ಮಂಗಳವಾರ, 22 ಜನವರಿ 2019 (14:16 IST)
ಬೆಂಗಳೂರು : ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿದ್ದರೂ ಕೂಡ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿರುವ ‘ಸಂವಿಧಾನ ಸಂಬಾಷಣೆ’ ಕಾರ್ಯಾಗಾರ ಯಥಾಪ್ರಕಾರ ನಡೆದಿದೆ.

ಬೆಳಗ್ಗೆ 10.30ಕ್ಕೆ ಸಂವಿಧಾನ ಕುರಿತ ಈ ಸಂವಾದ ಕಾರ್ಯಾಗಾರ ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಆಯೋಜಿಸಿದ್ದು, ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಭಾಷಣ ಮಾಡಿದ್ದಾರೆ. ಕಾರ್ಯಕ್ರಮ ಪ್ರಾರಂಭಕ್ಕೂ ಮೊದಲು ಶ್ರೀಗಳಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

 

ಆದರೆ ಶ್ರೀಗಳು ಅಗಲಿರುವ ಈ ಹೊತ್ತಿನಲ್ಲಿ ಇಂತಹ ಕಾರ್ಯಕ್ರಮದ ಅಗತ್ಯವಿಲ್ಲ. ಕೂಡಲೇ ಈ ಕಾರ್ಯಕ್ರಮವನ್ನು ರದ್ದು ಮಾಡುವಂತೆ ಕನ್ನಡ ಪರ ಸಂಘಟನೆ  ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ