ಗ್ರಾಮೀಣ ಪ್ರದೇಶದ ಜನರಿಗೂ ಉಚಿತ ಆರೋಗ್ಯ ಸೇವೆ ಒದಗಿಸಲು ಕಾರ್ಯಕ್ರಮ : ದಿನೇಶ್ ಗುಂಡೂರಾವ್

ಸೋಮವಾರ, 21 ಆಗಸ್ಟ್ 2023 (10:16 IST)
ಬೆಂಗಳೂರು : ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದಲೇ ಉಚಿತ ಆರೋಗ್ಯ ಶಿಬಿರಗಳನ್ನ ರಾಜ್ಯದಾದ್ಯಂತ ನಡೆಸಲು ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನಲ್ಲಿ ಇಂದು ಗಾಂಧಿನಗರ ಬೃಹತ್ ಉಚಿತ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದ್ದಾರೆ. ಗಾಂಧಿನಗರದಲ್ಲಿ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಉಚಿತ ಅರೋಗ್ಯ ಶಿಬಿರಲ್ಲಿ ಏರ್ಪಡಿಸಿದ್ದ ಆರೋಗ್ಯ ಸೇವೆಗಳನ್ನ ವೀಕ್ಷಿಸಿದ ಸಚಿವರು, ಇಲಾಖೆ ಹಾಗೂ ವೈದ್ಯರು, ಸಿಬ್ಬಂದಿಯವರ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ರೀತಿಯ ಶಿಬಿರಗಳು, ಆರೋಗ್ಯ ಸೇವೆಗಳು ರಾಜ್ಯದ ಹಳ್ಳಿಗಾಡಿನ ಜನರಿಗೂ ತಲುಪಬೇಕು. ಈ ನಿಟ್ಟಿನಲ್ಲಿ ರಾಜ್ಯದ ಜಿಲ್ಲೆಗಳು ಹಾಗೂ ತಾಲೂಕು ಮಟ್ಟಕ್ಕೂ ಉಚಿತ ಆರೋಗ್ಯ ಶಿಬಿರಗಳನ್ನ ಕೊಂಡೊಯ್ಯುವಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು. 

ಮುಂಜಾಗೃತವಾಗಿ ಕಾಯಿಲೆಗಳನ್ನ ತಡೆಗಟ್ಟುವುದು ಬಹುಮುಖ್ಯ. ಜನರ ಜೀವನ ಶೈಲಿ ಬದಲಾದಂತೆ, ಇವತ್ತಿನ ದಿನಮಾನಗಳಲ್ಲಿ ಬಿ.ಪಿ, ಶೂಗರ್, ಕ್ಯಾನ್ಸರ್, ಕಿಡ್ನಿ ಸಮಸ್ಯೆಯ ಕಾಯಿಲೆಗಳು ಜನರನ್ನ ಕಾಡುತ್ತಿವೆ. ಈ ಕಾಯಿಲೆಗಳನ್ನ ಮೊದಲೇ ಪತ್ತೆ ಹಚ್ಚಿದರೇ, ಚಿಕಿತ್ಸೆ ಮೂಲಕ ಆರಂಭದಲ್ಲೇ ಗುಣಪಡಿಸಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ