ಜುಲೈ 27 ರ ತನಕ ಈ ಜಿಲ್ಲೆಯಲ್ಲಿ ನಿಷೇಧಾಜ್ಞೆ

ಶುಕ್ರವಾರ, 17 ಜುಲೈ 2020 (21:09 IST)
ಡೆಡ್ಲಿ ಕೊರೊನಾ ನಿಯಂತ್ರಣಕ್ಕೆ ಜುಲೈ 27 ರ ಬೆಳಿಗ್ಗೆ  5  ಗಂಟೆ ವರೆಗೆ ಈ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಗದಗ ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಜುಲೈ 17 ರ ರಾತ್ರಿ 8 ಗಂಟೆಯಿಂದ ಜುಲೈ 27 ರ ಬೆಳಿಗ್ಗೆ  5 ಗಂಟೆಯವರೆಗೆ ಕೆಲವೊಂದು ವಿನಾಯಿತಿ  ನೀಡಿ ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು  ನಿಷೇಧಾಜ್ಞೆ  ಆದೇಶ ಹೊರಡಿಸಿದ್ದಾರೆ.

ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳು ಮತ್ತು ಅಂಗಡಿ -ಮುಂಗಟ್ಟುಗಳನ್ನು ತೆರೆಯಲು ಅನುಮತಿಸಲಾಗಿದೆ ಎ೦ದು ಗದಗ ಜಿಲ್ಲಾಧಿಕಾರಿ ಎ೦.ಸು೦ದರೇಶ ಬಾಬು ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ