ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧ ವಿಚಾರ; ಸಿಎಂ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ

ಶನಿವಾರ, 18 ಜನವರಿ 2020 (11:01 IST)
ಬೆಂಗಳೂರು : ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ವೈ ಗೆ ಸಂಸದ ತೇಜಸ್ವಿ ಸೂರ್ಯ ಮನವಿಯೊಂದನ್ನು ಮಾಡಿದ್ದಾರೆ.



ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸದಲ್ಲಿ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ್ಯ ಸಿಎಂ ಜೊತೆ ಮಾತುಕತೆ ನಡೆಸಿ  ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳು ಮಾರಕವಾದ ಹಿನ್ನಲೆಯಲ್ಲಿ  ಈ ಸಂ‍ಘಟನೆಗಳನ್ನು ನಿಷೇಧಿಸಲು ಆದಷ್ಟು ಬೇಗ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಿದ್ದಾರೆ.


ಹಿಂದೂ ಮುಖಂಡರಾದ ಸಂಸದ ತೇಜಸ್ವಿ ಸೂರ್ಯ ಹಾಗೂ ಸೂಲಿಬೆಲೆ ಹತ್ಯೆಗೆ ಡಿ.22ರಂದು ನಡೆಯುವ ಪೌರತ್ವ ಕಾಯ್ದೆ ಜನಜಾಗೃತಿ ವೇಳೆ ಎಸ್ ಡಿಪಿಐ ಕಾರ್ಯಕರ್ತರು ಪ್ಲ್ಯಾನ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ