ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಪ್ರತಿಬಂಧಕಾದೇಶ

ಬುಧವಾರ, 8 ಮಾರ್ಚ್ 2023 (16:07 IST)
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ ಕಚ್ಚಾ ಸಾಮಗ್ರಿ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣದಲ್ಲಿ ಆರೋಪಿಗಳಾಗಿರುವ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ, ಅವರ ಪುತ್ರ ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಎಂ ವಿ ಪ್ರಶಾಂತ್‌ ಕುಮಾರ್‌ ಅವರ ವಿರುದ್ಧ ಯಾವುದೇ ತೆರಹದ ಮಾನಹಾನಿ ಸುದ್ದಿ ಪ್ರಕಟಿಸದಂತೆ ಬೆಂಗಳೂರಿನ ಸತ್ರ ನ್ಯಾಯಾಲಯವು  ಮಾಧ್ಯಮಗಳ ವಿರುದ್ಧ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ. ಮಾಡಾಳ್‌ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್‌ ಕುಮಾರ್‌ ಅವರು ದಾಖಲಿಸಿರುವ ದಾವೆಯ ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಾಲಗೋಪಾಲ ಕೃಷ್ಣ ಅವರು ಈ ಆದೇಶ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ