ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡು ಪ್ರಚಾರ: ಕುಮಾರಸ್ವಾಮಿ
ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆ ನಿಮಿತ್ತ ಗ್ರಾಮ ವಾಸ್ತವ್ಯ ಹೂಡಿದ್ದ ಹೆಚ್ಡಿಕೆ ಭಾನುವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿ,
ಸಾವಿರಾರು ಜನರನ್ನು ಅನಾಥರನ್ನಾಗಿ ಮಾಡಿದ್ದೇ ಬಿಜೆಪಿ. ಕರ್ನಾಟಕ ರಾಜ್ಯ ಅತ್ಯಂತ ಶಾಂತಿಯುತವಾಗಿ ಇದ್ದ ರಾಜ್ಯ. ಜನ ನೆಮ್ಮದಿಯಿಂದ ಇದ್ದರು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬಿಜೆಪಿ ಬೆಂಕಿ ಹಚ್ಚುತ್ತಿದೆ.
ರಾಜ್ಯದಲ್ಲಿ ಶಾಂತಿ ನೆಲೆಸಬೇಕು. ಅದಕ್ಕೆ ಜೆಡಿಎಸ್ ಬರಲೇಬೇಕು. ಜೆಡಿಎಸ್ ಸರ್ಕಾರ ಬರುವ ಅನಿವಾರ್ಯತೆ ಹಿಂದೆಂದಿಗಿಂತ ಈಗ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.