ದಕ್ಷ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ: ಬಿಜೆಪಿ

ಬುಧವಾರ, 20 ಜುಲೈ 2016 (12:04 IST)
ಪಿಎಸ್‌ಐ ರೂಪಾ ತಂಬದ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ತಕ್ಷಣವೇ ಇಂತಹ ಪ್ರಕರಣಗಳಿಗೆ ಇತಿಶ್ರೀ ಹಾಡಬೇಕಾಗಿದೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ತಿಳಿಸಿದ್ದಾರೆ.
 
ರಾಜಾಜಿ ನಗರದ ಸುಗುಣ ಆಸ್ಪತ್ರೆಗೆ ಭೇಟಿ ನೀಡಿ. ಪಿಎಸ್‌ಐ ರೂಪಾ ತಂಬದ ಆರೋಗ್ಯದ ಕುರಿತು ವಿಚಾರಿಸಿಕೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಪಿಎಸ್‌ಐ ರೂಪಾ ತಂಬದ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಹಾಗೂ ಅವರ ಪೋಷಕರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಅವರ ಪ್ರಾಣಕ್ಕೆ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆಂದು ಹೇಳಿದರು.
 
ರಾಜ್ಯದಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ತಕ್ಷಣವೇ ಇಂತಹ ಪ್ರಕರಣಗಳಿಗೆ ಇತಿಶ್ರೀ ಹಾಡಬೇಕಾಗಿದೆ ಎಂದು ಹೇಳಿದರು.
 
ಪಿಎಸ್‌ಐ ರೂಪಾ ತಂಬದ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಯಾಗಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಬಹಿರಂಗವಾಗಬೇಕು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ