ಪ್ರತಿಭಟನೆ ವೇಳೆ ಆಸ್ತಿ-ಪಾಸ್ತಿ ಹಾನಿ ; ಡಿಕೆಶಿ ಬೆಂಬಲಿಗರ ವಿರುದ್ಧ ಎಫ್‍ ಐಆರ್ ದಾಖಲು

ಬುಧವಾರ, 4 ಸೆಪ್ಟಂಬರ್ 2019 (11:36 IST)
ರಾಮನಗರ : ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಸಿದವರಲ್ಲಿ 15 ಮಂದಿ ವಿರುದ್ಧ ಪೊಲೀಸರು ಎಫ್‍ ಐಆರ್ ದಾಖಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ವಿಚಾರಣೆಗೆ ಸರಿಯಾಗಿ ಸಹಕರಿಸಿದ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಕನಕಪುರದಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.


ಆ ವೇಳೆ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ ಹಿನ್ನಲೆಯಲ್ಲಿ ಪ್ರತಿಭಟನಾಕಾರರ ವಿರುದ್ಧ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು 15 ಕ್ಕೂ ಹೆಚ್ಚು ಜನರ ಮೇಲೆ ಎಫ್‍ಐಆರ್ ಹಾಕಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ