ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿ ವಿದ್ಯಾನಗರದ ಶಿರೂರ ಪಾರ್ಕ್ ಹತ್ತಿರದಲ್ಲಿರುವ ನೇತ್ರಾವತಿ ಸ್ಕ್ವೇರ್ ನಲ್ಲಿನ ಲೋಟಸ್ ಸ್ಪಾ ಆಂಡ್ ಬ್ಯೂಟಿ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.
ತುಳಸಿದಾಸ್ ಎಂಬಾತ ಸ್ಪಾ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದನು. ಪೊಲೀಸರು ದಾಳಿ ನಡೆಸಿ ಒಬ್ಬನನ್ನು ಬಂಧಿಸಿದ್ದು, ನಾಲ್ವರು ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
ಪ್ರತಿಯೊಬ್ಬ ಗಿರಾಕಿಗಳಿಂದ 2 ರಿಂದ 5 ಸಾವಿರ ವರೆಗೆ ಹಣ ಪಡೆದುಕೊಂಡು ಯುವತಿಯನ್ನು ಪೂರೈಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.