ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗ : ನರೇಂದ್ರ ಮೋದಿ

ಸೋಮವಾರ, 10 ಏಪ್ರಿಲ್ 2023 (09:52 IST)
ಮೈಸೂರು : ಭಾರತದಲ್ಲಿ ಈಗ 3,167 ಹುಲಿಗಳಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೈಸೂರಿನ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಆಯೋಜನೆಗೊಂಡ ಹುಲಿ ಯೋಜನೆಯ ಸುವರ್ಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ನರೇಂದ್ರ ಮೋದಿ 2022ರ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಿದರು.
 
ಈ ವೇಳೆ ಮಾತನಾಡಿದ ಅವರು, ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಪ್ರಾಜೆಕ್ಟ್ ಟೈಗರ್ನ ಯಶಸ್ಸು ಭಾರತಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಹೆಮ್ಮೆಯ ವಿಷಯವಾಗಿದೆ. ಭಾರತವು 75 ವರ್ಷಗಳ ಸ್ವಾತಂತ್ರ್ಯವನ್ನು ಪೂರ್ಣಗೊಳಿಸಿದೆ ಮತ್ತು ಮತ್ತು ಅದೇ ಸಮಯದಲ್ಲಿ, ವಿಶ್ವದ ಒಟ್ಟು ಹುಲಿಗಳ ಪೈಕಿ ಶೇ.75 ರಷ್ಟು ಭಾರತದಲ್ಲಿದೆ ಎಂದು ಹೇಳಿದರು.

ವಿಶ್ವದ ಭೂ ಪ್ರದೇಶದ ಕೇವಲ ಶೇ.2.4 ರಷ್ಟು ಭೂಮಿಯನ್ನು ಹೊಂದಿರುವ ಭಾರತವು ಜಾಗತಿಕ ವೈವಿಧ್ಯತೆಗೆ ಶೇ.8 ರಷ್ಟು ಕೊಡುಗೆ ನೀಡುತ್ತದೆ. ದಶಕಗಳ ಹಿಂದೆಯೇ ಭಾರತದಲ್ಲಿ ಚಿತಾಗಳು ಅಳಿದು ಹೋಗಿದ್ದವು. ನಾವು ಈಗ ಚೀತಾವನ್ನು ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ತಂದಿದ್ದೇವೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ