ಯುವತಿಯರು ಹಾಗೂ ಮಹಿಳೆಯರ ನೆರವಿಗೆ ವಾಟ್ಸಪ್ ಗ್ರುಪ್ ನೆರವಿಗೆ ಬರಲಿದೆ.
ಮಹಿಳೆಯರ ರಕ್ಷಣೆಗೆ ಪಿಂಕ್ ಗ್ರೂಪ್ ರಚನೆ ಮಾಡಲಾಗುತ್ತದೆ. ಮಂಗಳೂರು ನಗರದಲ್ಲಿ ಮಹಿಳೆಯರು, ವಿದ್ಯಾರ್ಥಿ ನಿಯರ ದೂರುಗಳ ಬಗ್ಗೆ ತ್ವರಿತ ಗಮನಹರಿಸಲು ಪಿಂಕ್ ಗ್ರೂಫ್ ಎಂಬ ವಾಟ್ಸಫ್ ಗ್ರೂಪ್ ರಚಿಸಲಾಗುವುದು. ಹೀಗಂತ ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ ತಿಳಿಸಿದ್ರು.
ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮ ಅಂಗವಾಗಿ ಶಾಲಾ - ಕಾಲೇಜುಗಳಲ್ಲಿ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಮಂಗಳೂರು ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಮೈಬೀಟ್ ಮೈ ಫ್ರೈಡ್ ಹಮ್ಮಿಕೊಳ್ಳಲಾಗಿದೆ.
ಅದೇ ರೀತಿ ಮಹಿಳೆಯರು, ವಿದ್ಯಾರ್ಥಿನಿಯರ ಸುರಕ್ಷತೆಗಾಗಿ, ಅವರ ನೆರವಿಗೆ ಮತ್ತು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಈ ವಾಟ್ಸಪ್ ಗ್ರೂಪ್ ರಚಿಸಲಾಗುವುದು ಅಂತ ಹೇಳಿದ್ರು.