ಸಚಿವ ಅನಂತ್ ಕುಮಾರ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿ ಏಟು: ಕಾಂಗ್ರೆಸ್‌ನಿಂದ ಪ್ರತಿಭಟನೆ

ಶನಿವಾರ, 18 ನವೆಂಬರ್ 2017 (12:54 IST)
ಸಿಎಂ ಸಿದ್ದರಾಮಯ್ಯ ವಿರುದ್ಧ ಕೀಳು ಭಾಷೆಯಲ್ಲಿ ನಿಂದಿಸಿದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ವಿರುದ್ಧ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಚಿವ ಹೆಗಡೆ ವಿರುದ್ಧ ಭಾರಿ ಪ್ರತಿಭಟನೆ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.
 
 ಸಿಎಂ ಸಿದ್ದರಾಮಯ್ಯ ವೋಟ್‌ಬ್ಯಾಂಕ್‌ಗಾಗಿ ಯಾರ ಬೂಟ್ ಬೇಕಾದ್ರೂ ನೆಕ್ತಾರೆ ಎಂದು ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ನೀಡಿರುವ ಹೇಳಿಕೆಗೆ ರಾಜ್ಯದಾದ್ಯಂತ ಕಾಂಗ್ರೆಸ್ ಮುಖಂಡರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.
 
ನಗರದ ರಾಮಾಸ್ವಾಮಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಚಿವ ಹೆಗಡೆ ಹೇಳಿಕೆ ಬಿಜೆಪಿ ಪಕ್ಷದ ಕೀಳು ಸಂಸ್ಕ್ರತಿ ತೋರಿಸುತ್ತದೆ.ಇಂತಹ ವ್ಯಕ್ತಿಯನ್ನು ಕೇಂದ್ರ ಸಚಿವರನ್ನಾಗಿಸಿರುವುದು ನಾಚಿಕೆಗೇಡಿತನದ ಸಂಗತಿ ಎಂದು ಕಾಂಗ್ರೆಸ್ ಶಾಸಕ ಎಂ.ಕೆ. ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. 
 
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಕೂಡಾ ಪ್ರತಿಭಟನೆಯಲ್ಲಿ ಪಾಲ್ಗೊಂಡು ಒಂದು ರಾಜ್ಯದ ಮುಖ್ಯಮಂತ್ರಿಯ ವಿರುದ್ಧ ಸಚಿವರಾಗಿದ್ದವರು ಇಂತಹ ಕೀಳು ಭಾಷೆ ಬಳಸುವುದು ಹೇಡಿತನದ ಲಕ್ಷಣವಾಗಿದೆ ಎಂದು ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ