ಕರ್ನಾಟಕ ರಕ್ಷಣಾ ವೇದಿಕೆಯಿಂದ ಕಾಲಾ ಚಿತ್ರದ ಬಿಡುಗಡೆ ವಿರೋಧಿಸಿ ಪ್ರತಿಭಟನೆ

ಶನಿವಾರ, 2 ಜೂನ್ 2018 (13:53 IST)
ಬೆಂಗಳೂರು : ಸೂಪರ್ ಸ್ಟಾರ್ ರಜನೀಕಾಂತ್ ಅವರು ಕಾವೇರಿ ವಿವಾದದಲ್ಲಿ ಕರ್ನಾಟಕದ ವಿರುದ್ಧವಾಗಿ ಮಾತನಾಡಿದಕ್ಕೆ ಇದೀಗ ಅವರ  ಅಭಿನಯದ ಕಾಲಾ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಬಾರದು ಎಂದು ಎಲ್ಲೆಡೆ ಬಾರೀ ವಿರೋಧ ವ್ಯಕ್ತವಾಗುತ್ತಿದೆ.


ಈ ಬಗ್ಗೆ ಹಲವು ಸಂಘಟನೆಗಳು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿಯನ್ನು ನೀಡಿದ್ದರು. ಆದರೆ ಇದೀಗ ರಜನಿಕಾಂತ್ ಅಭಿನಯದ ಕಾಲಾ ಸಿನಿಮಾ ಬಿಡುಗಡೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ