ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

ಬುಧವಾರ, 2 ಆಗಸ್ಟ್ 2023 (21:00 IST)
ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ, ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಸಿದ್ದಾರೆ. ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂದೆ ಕನ್ನಡ ಪರ ಸಂಘಟನೆಗಳು ಕೆಲಕಾಲ ಪ್ರತಿಭಟನೆ ನಡೆಸಿದರು. ಕೈಯಲ್ಲಿ ದವಸ ಧಾನ್ಯಗಳನ್ನ ಹಿಡಿದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಕೂಡಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಲ್ಲಿಸಬೇಕು ಹಾಗೂ ಕಡಿಮೆ ಮಾಡಬೇಕೆಂದು ಒತ್ತಾಯ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ