ಸುಪ್ರೀಂ ಆದೇಶ ವಿರೋಧಿಸಿ ಪ್ರತಿಭಟನೆ

ಗುರುವಾರ, 21 ಸೆಪ್ಟಂಬರ್ 2023 (18:42 IST)
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದ ಬೆನ್ನಲ್ಲೇ ಮೈಸೂರಲ್ಲಿ ಪ್ರತಿಭಟನೆ ನಡೆಸಲಾಗಿದೆ.. ಮೈಸೂರಿನಲ್ಲಿ ಕರ್ನಾಟಕ ಸೇನಾ ಪಡೆ ಮತ್ತು ರಾಜ್ಯ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಪೊರಕೆ ಹಿಡಿದು ಪ್ರತಿಭಟನೆ ನಡೆಸಲಾಗಿದೆ.. ಮೈಸೂರು ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗಿದೆ.. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಡಳಿತ ಭವನದ ಎದುರು ಪ್ರೊಟೆಸ್ಟ್​ ನಡೆಸಿದ ಪ್ರತಿಭಟನಾಕಾರರು, ಕಾವೇರಿ ನಿರ್ವಹಣಾ ಪ್ರಾಧಿಕಾರದ ವಿರುಧ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು. ಕಾವೇರಿ ನೀರು ಹರಿಸುವ ಆದೇಶವನ್ನ ಕೂಡಲೇ ಹಿಂಪಡೆಯಬೇಕೆಂದು ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಿದ್ರು. ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸಿದ್ರೆ ಮುಂದೆ ಉಗ್ರ ಹೋರಾಟ ಮಾಡೋದಾಗಿ ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದ್ರು.

 
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್​ ಆದೇಶ ಹೊರಬೀಳ್ತಿದ್ದಂತೆ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದೆ.. ಕರವೇ ಸ್ವಾಭಿಮಾನಿ ಸಂಘಟನೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.. ಕರವೇ ಸ್ವಾಭಿಮಾನಿ ಬಣದಿಂದ ಬೃಹತ್ ಪಾದಯಾತ್ರೆ ನಡೆಸಲಾಗಿದೆ.. ಇನ್ನು ವಿಧಾನಸೌಧಕ್ಕೆ ಮುತ್ತಿಗೆ ಹೊರಟ ಕಾರ್ಯಕರ್ತರಿಗೆ ಪೊಲೀಸರು ತಡೆ ನೀಡಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದಿದ್ದಾರೆ. ಪೊಲೀಸರು- ಪ್ರತಿಭಟನಾಕರರ ಮಧ್ಯೆ ತಳ್ಳಾಟ-ನೂಕಾಟ ಉಂಟಾಗಿದೆ..

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ