ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

ಬುಧವಾರ, 9 ಆಗಸ್ಟ್ 2023 (13:32 IST)
ಬಿಜೆಪಿ ರೈತ ಮೋರ್ಚಾ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗಿದೆ.ಕೃಷಿ ಸುಧಾರಣಾ ಕಾಯ್ದೆ ವಾಪಸ್, ಎಪಿಎಂಸಿ ಕಾಯ್ದೆ ವಾಪಸ್ ಸೇರಿ ರೈತ ಸಂಬಂಧಿ ಯೋಜನೆಗಳನ್ನು ರಾಜ್ಯ ಬಜೆಟ್‌ನಿಂದ ಕೈಬಿಟ್ಟಿದ್ದನ್ನು ವಿರೋಧಿಸಿ ಪ್ರತಿಭಟನೆ ಮಾಡಲಾಗಿದ್ದು,ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ರೈತ ಮೋರ್ಚಾದ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ.ಈ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
 
ಇನ್ನೂ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದಂತೆ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
 
ಈ ವೇಳೆ ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನಿಲುವು ತಳೆದಿದೆ.ನಾವು ಬೆಳೆ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೆವು.ಅಡೆತಡೆಯಿಲ್ಲದೆ ರೈತರ ಮಾರಾಟಕ್ಕೆ ಅವಕಾಶ ನೀಡಿದ್ದೆವು.ಮಧ್ಯವರ್ತಿ ಹಾವಳಿ ತಪ್ಪಿಸುವ ಕೆಲಸ ಮಾಡಿದ್ದೆವು  ಇದಕ್ಕೆ ಕಾಂಗ್ರೆಸ್ ಸರ್ಕಾರ ಕಲ್ಲು ಹಾಕಿದೆ.ಸಣ್ಣ ನೀರಾವರಿ ಯೋಜನೆ ಕುಂಠಿತಗೊಂಡಿವೆ.ಜನವಿರೋಧಿ ಸರ್ಕಾರದಿಂದ ಏನನ್ನ ಬಯಸಬಹುದು?೧೩೭ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೇವಲ ಒಬ್ಬರಿಗೆ ಪರಿಹಾರ ನೀಡಿದ್ದಾರೆ.ಕೇವಲ ೩೭ ಅರ್ಜಿಗಳ ವಿಲೇವಾರಿ ಆಗಿದೆ.ಡಿಸಿಎಂ ಒಬ್ಬ ರೈತರ ಮನೆಗೆ ಹೋಗಿದ್ದಾರಾ?ಎಲ್ಲ ಅಧಿಕಾರಿಗಳಿಂದ ವಸೂಲಿ ಮಾಡುತ್ತಿದ್ದಾರೆ.ಸರ್ಕಾರ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ಮಾಡ್ತಿದೆ.ರೈತ ಕುಟುಂಬಗಳ ಮೇಲೆ ಅನ್ಯಾಯ ಮಾಡ್ತಿದೆ ಎಂದು ಸರ್ಕಾರದ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ ಹೊರಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ