ಕ್ಲಾಸ್ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ?
ಇತ್ತೀಚೆಗೆ ಕಾಲೇಜು ಆಡಳಿತ ಮಂಡಳಿ ಮೀಟಿಂಗ್ನಲ್ಲಿ ಹಿಜಬ್ ಮತ್ತು ಕೇಸರಿ ಶಾಲು ಹಾಕಬಾರದು ಎಂದು ನಿರ್ಧಾರ ಮಾಡಲಾಗಿದೆ. ಆದರೂ ವಿದ್ಯಾರ್ಥಿನಿಯರು ಹಿಜಬ್ ಹಾಕಿಕೊಂಡು ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಕಾಲೇಜು ಪ್ರಾಂಶುಪಾಲರು ಮತ್ತು ಕೆಲ ಶಿಕ್ಷಕರ ಕಾರಣವಾಗಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಕಾಲೇಜು ವಿದ್ಯಾರ್ಥಿ ಸಂಘದ ನಾಯಕನ ಬದಲಾವಣೆಗೂ ಸಹ ಮನವಿ ಮಾಡಿದರು.