ಕಬ್ಬು ಬೆಳೆಗಾರರಿಂದ ಪ್ರತಿಭಟನೆ: ಕಾರಣ ಗೊತ್ತಾ?

ಸೋಮವಾರ, 28 ಜನವರಿ 2019 (18:34 IST)
ಕಬ್ಬು ಬೆಳೆಗಾರರಿಂದ ಪ್ರತಿಭಟನೆ ನಡೆಸಲಾಗಿದೆ. 
 
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಸರಕಾರ ರೈತರ ಪರ ಯೋಜನೆಗಳನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ. ಭತ್ತ ಖರೀದಿ ಕೇಂದ್ರಗಳನ್ನು ತೆರೆದಿದ್ದರೂ ಭತ್ತ ಖರೀದಿ ಮಾಡುತ್ತಿಲ್ಲ ಎಂದು ದೂರಿದರು. 
 
ಭತ್ತ ಖರೀದಿ ಆಗದ ಕಾರಣ ರೈತರಿಗೆ ನಷ್ಟವಾಗುತ್ತಿದೆ. ಪ್ರತಿಕ್ವಿಂಟಲ್ ಭತ್ತಕ್ಕೆ 500 ರೂ. ಪರಿಹಾರ ನೀಡಬೇಕೆಂದು ಆಗ್ರಹ ಮಾಡಿದರು. ಎಪಿಎಂಸಿಯಲ್ಲಿ ಭತ್ತ ಖರೀದಿ ಮಾಡಬೇಕು. ಕಬ್ಬಿನ ಉಪ ಉತ್ಪನ್ನಗಳಿಂದ ಬಂದ ಲಾಭದಲ್ಲಿ ಶೇ. 60 ರಷ್ಟು ಕಬ್ಬು ಬೆಳೆಗಾರರಿಗೆ ನೀಡಬೇಕು. ಶ್ರೀರಾಮ ಸಕ್ಕರೆ ಕಾರ್ಖಾನೆ ಮತ್ತೆ ಆರಂಭಿಸುವಂತೆ ಒತ್ತಾಯ ಮಾಡಿದರು. 
 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ