ಉಗ್ರರ ದಾಳಿ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಜಮ್ಮು-ಕಾಶ್ಮೀರದಲ್ಲಿ ಭಾರತ ಯೋಧರ ಕಾನ್ವಾಯ್ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಪ್ರತಿಭಟನೆಗಳು ರಾಜ್ಯಾದ್ಯಂತ ನಡೆದಿವೆ.
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ನಗರದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು. ನಗರದ ಕಚೇರಿ ಮುಂದೆ ಜಮಾವಣೆಗೊಂಡ ನಮೋ ಸೇನೆ ಹಾಗೂ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು, ಪ್ರತಿಭಟನೆ ನಡೆಸಿದರು. ಪಾಕಿಸ್ತಾನ ಮತ್ತು ಉಗ್ರರ ವಿರುದ್ಧ ಘೋಷಣೆ ಕೂಗಿದರು. ಉಗ್ರದಾಳಿಯ ಬಗ್ಗೆ ಪ್ರತಿಭಟನಾಕಾರರು ಖಂಡಿಸಿ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಇದು ರಣಹೇಡಿಗಳು ಮಾಡಿರುವ ಕೃತ್ಯವಾಗಿದ್ದು, ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠವನ್ನ ಕೇಂದ್ರ ಸರ್ಕಾರ ಈ ಕೂಡಲೇ ಕಲಿಸಬೇಕೆಂದು ಪ್ರಧಾನಿ ಮೋದಿಗೆ ತಹಸೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಕೆ ಮಾಡಿದರು.