ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ರಚನೆಗೆ ನಿಯಮಾವಳಿ ಜಾರಿ ತರದ ಹಿನ್ನಲೆ ಬಿಜೆಪಿಯ ಜಿಲ್ಲಾ ಪಂಚಾಯತ್ ಸದಸ್ಯರಿಂದ ಪ್ರತಿಭಟನೆ ನಡೆದಿದೆ.
ಶಿವಮೊಗ್ಗ ನಗರದ ಜಿಲ್ಲಾ ಪಂಚಾಯತ್ ಸಿಇಓ ಕಚೇರಿ ಎದುರು ಪ್ರತಿಭಟನೆ ಹಾಗೂ ಧರಣಿ ನಡೆಸಲಾಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರ ಹಾಗೂ ಆಡಳಿತ ಮಂಡಳಿಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಸದಸ್ಯರ ಕೊರಂ ಇಲ್ಲದೆ 3 ಬಾರಿ ಮುಂದೂಡಲಾಗಿದೆ. ಜಿಲ್ಲಾ ಪಂಚಾಯತ್ ಗೆ ಸರಕಾರದಿಂದ 650 ಕೋಟಿ ರೂ. ಹಣ ಬಂದಿದ್ದು, ಸ್ಥಾಯಿ ಸಮಿತಿ ರಚಿಸದ ಕಾರಣ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ನೆಲಕಚ್ಚಿವೆ.
ಕೂಡಲೇ ಸ್ಥಾಯಿ ಸಮಿತಿ ರಚನೆ ಮಾಡಬೇಕು ಹಾಗೂ ಜಿಲ್ಲೆಯ ಸರ್ವತೋಮುಖ ಬೆಳವಣಿಗೆ ವಿ ನಿಯಮಾವಳಿ ಜಾರಿ ತರಬೇಕೆಂದು ಒತ್ತಾಯ ಮಾಡಲಾಯಿತು. ಕಳೆದ 8 ತಿಂಗಳಿನಿಂದಲೂ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ರಚನೆಯಾಗಿಲ್ಲ.