ಜೀತದಾಳು ಬಿಡುಗಡೆ ಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ

ಬುಧವಾರ, 19 ಸೆಪ್ಟಂಬರ್ 2018 (20:39 IST)
ಜೀತದಾಳುಗಳಿಗೆ ಬಿಡುಗಡೆ ಪತ್ರ ನೀಡಲು ತಾಲ್ಲೂಕು ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಜೀತ ವಿಮುಕ್ತಿ ಕರ್ನಾಟಕ ಜೀವಿಕ ಬಂಧನ ಮುಕ್ತ ಜೀವನ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿದರು.

ಗುಂಡ್ಲುಪೇಟೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಸಂಘಟನೆಯ ಕಾರ್ಯಕರ್ತರು, ತಾಲ್ಲೂಕು ಕಚೇರಿ ಎದುರು ಜಮಾಯಿಸಿ ಘೋಷಣೆಗಳನ್ನು ಕೂಗಿದರು‌.

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಜೀತ ಪದ್ಧತಿ ಇನ್ನೂ ಜೀವಂತವಾಗಿದ್ದು, ಮಾಲೀಕ ಹಾಗೂ ಜೀತದಾಳುಗಳನ್ನ ಬೆದರಿಸಿ ಜೀತ ಪದ್ಧತಿಯನ್ನು ಅಧಿಕಾರಿಗಳು ಮುಚ್ಚಿ ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
2014-15 ರಲ್ಲಿ ಗುರುತಿಸಿರುವ 47 ಮಂದಿಗೆ ಕೂಡಲೇ ಬಿಡುಗಡೆ ಪತ್ರ ನೀಡಬೇಕು, 2016-17ರಲ್ಲಿ ಅರ್ಜಿ ಹಾಕಿರುವ ಜೀತದಾಳುಗಳಿಗೂ ಬಿಡುಗಡೆ ಪತ್ರ ನೀಡುವಂತೆ ಒತ್ತಾಯಿಸಿದರು. ಜೀತದಾಳುಗಳ ಕುರಿತು ಸಮೀಕ್ಷೆ ನಡೆಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ