ವೇತನ ಹೆಚ್ಚಳಕ್ಕಾಗಿ ಪ್ರೊಟೆಸ್ಟ್

ಭಾನುವಾರ, 17 ಸೆಪ್ಟಂಬರ್ 2023 (18:42 IST)
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು‌ ಬೀದರ್​ ನಗರದಲ್ಲಿ ಪ್ರತಿಭಟನೆ ನಡೆಸಿದರು. ಬೀದರ್​ನ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು. ಈ ಹಿಂದೆ ಚುನಾವಣೆ ಸಮಯದಲ್ಲಿ ಪ್ರಿಯಾಂಕಾ ಗಾಂಧಿಯವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ವೇತನ ಹೆಚ್ಚಿಸುವ ಭರವಸೆ ನೀಡಿದ್ರು. 6ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ಹಾಗೂ ಸಹಾಯಕರಿಯರಿಗೆ 10 ಸಾವಿರ ನೀಡುವ ಭರವಸೆ ನೀಡಿದ್ರು. ಆದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 100 ದಿನ ಕಳೆಯುತ್ತಾ ಬಂದ್ರು ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಗಮನ ಹರಿಸುತ್ತಿಲ್ಲ. ವೇತನ ಕಡಿಮೆ ಇರುವುದರಿಂದ ಅಂಗನವಾಡಿ ಕಾರ್ಯಕರ್ತೆಯರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು, ಸರ್ಕಾರ ತಾವು ನೀಡಿದ ಭರವಸೆ ಜೊತೆಗೆ ನಿವೃತ್ತಿ ಸಮಯದಲ್ಲಿ 3 ಲಕ್ಷ ಇಡಗಂಟು ನೀಡಬೇಕು ಎಂದು ಒತ್ತಾಯಿಸಿದರು. ಸರ್ಕಾರ ಶೀಘ್ರವಾಗಿ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಆಲಿಸಿ ವೇತನ ಹೆಚ್ವಿಸುವ ಮೂಲಕ ಆಸರೆ ಆಗಬೇಕು‌ ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ