ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ
ಬುಧವಾರ, 11 ಡಿಸೆಂಬರ್ 2019 (10:38 IST)
ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಚಲೋ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ.
ರಾಜ್ಯದ ಬೇರೆ ಬೇರೆ ಕಡೆಯಿಂದ ಬಂದ ಅಂಗನವಾಡಿ ಕಾರ್ಯಕರ್ತೆಯರು ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಡಲು ಸಜ್ಜಾಗಿದ್ದರು. ಆದರೆ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಿರುವ ಹಿನ್ನಲೆಯಲ್ಲಿ ಪೊಲೀಸರು ಅವರನ್ನು ತಡೆದ ಕಾರಣ ತುಮಕೂರಿನಲ್ಲಿ ಇಂದು ಸಂಜೆಯವರೆಗೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಬಂದು ತಮ್ಮ ಅಹವಾಲು ಸ್ವೀಕರಿಸಿ, ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಕಾರ್ಯಕರ್ತೆಯರು ತಿಳಿಸಿದ್ದಾರೆ.