ತೃತೀಯ ಲಿಂಗಿಗಳಿಂದ ಪ್ರತಿಭಟನೆ

ಗುರುವಾರ, 20 ಡಿಸೆಂಬರ್ 2018 (14:36 IST)

ಲಿಂಗಿ ಪರಿವರ್ತಿತರ ಹಕ್ಕುಗಳ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡನೆಮಾಡುವುದರಿಂದ ಕೈಬಿಡಬೇಕು. ಹೀಗಂತ ಒತ್ತಾಯಿಸಿ ತೃತೀಯ ಲಿಂಗಿಗಳು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಟೌನ್ಹಾಲ್ ಮುಂಭಾಗದಲ್ಲಿ ತೃತೀಯಲಿಂಗಿಗಳು ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಮಂಡನೆಯಾದ ಮಸೂದೆಯನ್ನು ಅನುಮೋದನೆಗಾಗಿ ರಾಜ್ಯ ಸಭೆಯ ಆಯ್ಕೆ ಸಮಿತಿಗೆ ಶಿಫಾರಸ್ಸು ಮಾಡಬೇಕೆಂದು ತೃತೀಯಲಿಂಗಿ ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.

ಮಸೂದೆಯಲ್ಲಿ ತೃತೀಯ ಲಿಂಗಿಗಳೆಂದರೆ ಯಾರು ಎಂಬ ಬಗ್ಗೆ ಸ್ಪಷ್ಟವಾದ ವ್ಯಾಖ್ಯಾನವಿಲ್ಲ. ಬಹಳಷ್ಟು ತೃತೀಯ ಲಿಂಗಿಗಳು ತಮ್ಮನ್ನು ತಾವು ತೃತೀಯ ಲಿಂಗಿ ಎಂದು ಗುರುತಿಸಿಕೊಳ್ಳಲು ಇಚ್ಛಿಸುವುದಿಲ್ಲ. ಬದಲಾಗಿ ಅವರು ಗಂಡು ಅಥವಾ ಹೆಣ್ಣು ಎಂದು ಗುರುತಿಸಿಕೊಳ್ಳಲು ಬಯಸುತ್ತಾರೆ. ಹಿನ್ನೆಲೆಯಲ್ಲಿ ನೋಡಿದರೆ ಇದು ಅಂತಹವರ ಆಯ್ಕೆಯ ಅವಕಾಶ ನೀಡಿದೆಯೇ ಎಂಬುದು ಕೂಡ ಸ್ಪಷ್ಟವಾಗಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಭಾರತದಲ್ಲಿ ಇರುವ ಸುಮಾರು 18 ಲಕ್ಷ ಮಂದಿ ತೃತೀಯ ಲಿಂಗಿಗಳು ಸಮಾಜದಲ್ಲಿ ಎದುರಿಸುತ್ತಿರುವ ಅವಮಾನ, ತಾರತಮ್ಯ ಮತ್ತು ನಿಂದನೆಯನ್ನು ನಿವಾರಿಸುವ ನಿಟ್ಟಿನಲ್ಲಿ ಅವರಿಗೆ ಕಾನೂನು ರಕ್ಷಣೆ ಒದಗಿಸಲು ಮತ್ತು ಮೂಲಕ ಸಮಾಜದಲ್ಲಿ ಸಮಾನ ಸ್ಥಾನಮಾನ ನೀಡಲು ಪ್ರತ್ಯೇಕ ಕಾಯ್ದೆ ಜಾರಿಗೆ ತರುವ ಉದ್ದೇಶದಿಂದ ಮಸೂದೆ ರಚಿಸಲಾಗಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ