ಮತಂತಾರ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಬುಧವಾರ, 22 ಡಿಸೆಂಬರ್ 2021 (17:25 IST)
ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಅನ್ನು ಮಂಗಳವಾರ ಮಂಡಿಸಲಾಗಿದೆ.
 
ಆಮಿಷ ಒಡ್ಡಿ ನಡೆಯುವ ಮತಾಂತರಗಳನ್ನು ನಿಷೇಧಿಸುವ ಪ್ರಸ್ತಾವ ಇರುವ 'ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021' ಮಸೂದೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದರು.ಕರ್ನಾಟಕದ ಮತಾಂತರ ವಿರೋಧಿ ಮಸೂದೆ ವಿರುದ್ಧ ಬುಧವಾರ ಬೆಂಗಳೂರಿನಲ್ಲಿ ಕ್ರೈಸ್ತ ಸಮುದಾಯದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿ ಇಂದು ಮಸೂದೆಯ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಚರ್ಚೆ ಮಾಡಲಿದ್ದಾರೆ.
 
ಸರ್ಕಾರದ ನಿರ್ಧಾರ ನೋವು ತರಿಸಿದೆ
 
"ಕರ್ನಾಟಕ ಸರ್ಕಾರ ಸಾರ್ವಜನಿಕವಾಗಿ ಚರ್ಚೆಗೆ ಅವಕಾಶವನ್ನೇ ನೀಡದೆ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಮುಂದಾಗಿದೆ. ಕ್ರಿಸ್​ಮಸ್ ಹಬ್ಬದ ಸಂದರ್ಭದಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ನಮಗೆ ನೋವುಂಟು ಮಾಡಿದೆ," ಎಂದು ಆರ್ಚ್​ ಬಿಷಪ್ ಪೀಟರ್​ ಮಾಚಾಡೋ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ