ಪ್ರಚೋದನಕರಿ ಹೇಳಿಕೆ: ಕೆಎಸ್ ಈಶ್ವರಪ್ಪ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿದ ಪೊಲೀಸ್‌

Sampriya

ಶುಕ್ರವಾರ, 15 ನವೆಂಬರ್ 2024 (18:06 IST)
Photo Courtesy X
ಶಿವಮೊಗ್ಗ: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಶಿವಮೊಗ್ಗದಲ್ಲಿ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ಇಸ್ಲಾಮೀಕರಣ ಆರೋಪ ಮತ್ತು ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಕಾಂಗ್ರೆಸ್ ನಾಯಕರು ಮತ್ತು ಮುಸ್ಲಿಂರನ್ನು ರಸ್ತೆಯಲ್ಲಿ ಹುಡುಕಿ ಕೊಲ್ಲುವ ಕಾಲ ಬರುತ್ತದೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

 ಸಿಎಂ ಸಿದ್ದರಾಮಯ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲೀಮರಿಗೆ ಶೇಕಡಾ 4 ರಷ್ಟು ಮಿಸಲಾತಿ ಘೋಷಣೆ ಮಾಡಲು ಹೊರಟಿದ್ದಾರೆ. ಇವರೇನು ಹಿಂದುಸ್ಥಾನವನ್ನು ಪಾಕಿಸ್ಥಾನ ಮಾಡಲು ಹೊರಟಿದ್ದಾರ? ಇದು ಹೀಗೆ ಮುಂದುವರೆದರೆ ಕಾಂಗ್ರೆಸಿಗರನ್ನು ಹುಡುಕಿ ಹೊಡೆದು ಕೊಲ್ಲುವಂತಹ ದಿನಗಳು ಬಂದರೂ ಆಶ್ಚರ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು.

ಇದೀಗ ಈ ಸಂಬಂಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಜಯನಗರ ಠಾಣೆ ಇನ್ಸ್‌ಪೆಕ್ಟರ್‌ ಹೆಚ್.ಎಂ.ಸಿದ್ದೇಗೌಡ ಪ್ರಕರಣ ದಾಖಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ