ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರಿ ಇಲಾಖೆಯಲ್ಲಿ ಕೆಲಸ, ಪರಿಹಾರಕ್ಕೆ ತೀರ್ಮಾನ: ಪರಮೇಶ್ವರ್‌

Sampriya

ಭಾನುವಾರ, 4 ಆಗಸ್ಟ್ 2024 (14:19 IST)
ಬೆಂಗಳೂರು: ಮೃತ ಸಬ್‌ ಇನ್‌ಸ್ಪೆಕ್ಟರ್‌ ಪರಶುರಾಮ್ ಪತ್ನಿಗೆ ಸರ್ಕಾರಿ ಇಲಾಖೆಯಲ್ಲಿ ಕೆಲಸ, ಪರಿಹಾರ ಕೊಡುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ಪಿಎಸ್‌ಐ ಪರಶುರಾಮ್ ನಿಗೂಢ ಸಾವು ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಲಿನ ಆಡಳಿತ ಪಕ್ಷದ ಶಾಸಕದ ವಿರುದ್ಧ ಆಪಾದನೆ ಕೇಳಿ ಬಂದಿದೆ. ಸಿಐಡಿ ತನಿಖೆಗೆ ಪ್ರಕರಣವನ್ನು ಕೊಟ್ಟಿದ್ದೇವೆ, ತನಿಖೆ ನಡೆಯುತ್ತಿದೆ. ಇದು ಆತ್ಮಹತ್ಯೆ ಅಲ್ಲ ಎಂದು ಇಲಾಖೆ ಹೇಳಿದೆ ಎಂದು ತಿಳಿಸಿದ್ದಾರೆ.

ಪರಶುರಾಮ್ ಯಾವುದೇ ಡೆತ್‌ನೋಟ್ ಬರೆದಿಲ್ಲ. ವರ್ಗಾವಣೆ ವಿಚಾರದಿಂದ ಬೇಸರಗೊಂಡಿರುವುದಾಗಿ ಅವರ ಪತ್ನಿ ಹೇಳಿದ್ದಾರೆ. ಆ ಅಂಶವನ್ನೂ ತನಿಖೆಯ ವೇಳೆ ಪರಿಶೀಲಿಸಲಾಗುವುದು ಎಂದರು.

ಆಡಳಿತ ಪಕ್ಷದ ಶಾಸಕರು ಶಾಮೀಲಾಗಿದ್ದರೂ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಕಾರಣ ಗೊತ್ತಾಗುತ್ತೆ. ಪರಶುರಾಮ್‌ ಪತ್ನಿಗೆ ಇಲಾಖೆಯಲ್ಲಿ ಕೆಲಸ ಪರಿಹಾರ ಕೊಡೋಕೆ ಸರ್ಕಾರ ತೀರ್ಮಾನ ಸರ್ಕಾರ ಮಾಡಿದೆ ಎಂದು ತಿಳಿಸಿದ್ದಾರೆ.

‌10 ತಿಂಗಳು ಸರ್ಕಾರ ಇರಲ್ಲ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಂತಹ ಮಾತುಗಳು ಬರೋದು ಸ್ವಾಭಾವಿಕ. ಅಸ್ಥಿರವಾಗುವ ಸೂಚನೆಗಳು ನಮ್ಮಲ್ಲಿ ಕಾಣಿಸ್ತಿಲ್ಲ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ