ಪಿಎಸ್‌ಐ ನೇಮಕಾತಿ ಹಗರಣ-ಕಮಿಷನ್ ದಂಧೆ ಆರೋಪ
ಪಿಎಸ್‌ಐ ನೇಮಕಾತಿ ಹಗರಣ, ಕಾಮಗಾರಿಗಳಲ್ಲಿ ಶೇ.40 ಪರ್ಸೆಂಟ್ ಕಮಿಷನ್ ದಂಧೆ ಆರೋಪಗಳ ನಡುವೆ ಸಿಎಂ ಆಗಲು 2,500 ಕೋಟಿ, ಸಚಿವರಾಗಲು 100 ಕೋಟಿ ರೂ. ಸಿದ್ಧವಿಟ್ಟುಕೊಳ್ಳಬೇಕು ಎಂಬುದಾಗಿ ದಿಲ್ಲಿಯಿಂದ ಬಂದಿದ್ದ ಕೆಲವರು ಹೇಳಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರ್ಕಾರ ಹಾಗೂ ಬಿಜೆಪಿಗೆ ತೀವ್ರ ಮುಜುಗರಕ್ಕೀಡು ಮಾಡಿದೆ..ಈ ಹಿನ್ನೆಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ನೀಡಿದ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಬಿಜೆಪಿ ರಾಜ್ಯ ಸಮಿತಿ ಶಿಫಾರಸು ಮಾಡಿದೆ. ಯತ್ನಾಳ್ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿಗೆ ಮಾಹಿತಿ ರವಾನೆ ಮಾಡಲಾಗಿದ್ದು, ಹಲವು ಬಾರಿ ಮುಜುಗರದ ಹೇಳಿಕೆ ನೀಡಿರುವ ಬಗ್ಗೆ ವರದಿ ನೀಡಲಾಗಿದೆ..ಇಂದು ಸಂಜೆ ವೇಳೆಗೆ ಕೇಂದ್ರ ಶಿಸ್ತು ಸಮಿತಿ ಕ್ರಮದ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.