ರಾಜ್ಯದಲ್ಲಿ ನಡೆದಿರುವ ಪಿಎಸ್ಐ ಹಗರಣ ದಿನಕ್ಕೊಂದು ತಿರುವುಪಡೆಯುತ್ತ, ಬಗೆದಷ್ಟೂ ಆಳ ಎಂಬಂತಾಗುತ್ತಿದ್ದು, ಇದೀಗ ಆ ಸಂಬಂಧವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಹಾಗೂ ಇದೀಗ ಆಪ್ ಮುಖಂಡರಾಗಿರುವ ಭಾಸ್ಕರ್ ರಾವ್ ಮಹತ್ವದ ಸಂಗತಿಯೊಂದನ್ನು ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿರುವ ಅವರು, ಪಿಎಸ್ಐ ಹಗರಣದ ಕುರಿತು ನನಗೆ ಮೊದಲೇ ವಾಸನೆ ಇತ್ತು ಎಂಬುದಾಗಿ ತಿಳಿಸಿದ್ದಾರೆ. ನಾನು ಬೆಂಗಳೂರು ನಗರ ಪೋಲಿಸ್ ಆಯುಕ್ತ ಆಗಿದ್ದಾಗ ಅಮೃತ್ ಪೌಲ್ ಮುಂದಿನ ಕಮಿಷನರ್ ಆಗುತ್ತಾರೆ ಎಂಬ ಸುದ್ದಿ ಇತ್ತು. ಆಗಾಗ್ಯೆ ಮುಖ್ಯಮಂತ್ರಿ ಮನೆಗೆ ಬರುವಾಗ ಕೂಡ ನಾನು ಪ್ರಶ್ನೆ ಮಾಡಿದ್ದೆ. ಇದು ಹಗರಣ ಎಂಬುವುದಾಗಿ ನನಗೆ ಮೊದಲೇ ಗೊತ್ತಿತ್ತು ಎಂದಿರುವ ಅವರು, ರಾಜ್ಯಪಾಲರ ಬಳಿಗೆ ಈ ವಿಷಯವನ್ನು ಕೊಂಡೊಯ್ದ ಮೊದಲ ಪಕ್ಷ ಆಮ್ ಆದ್ಮಿ ಎಂಬುದಾಗಿಯೂ ಅವರು ಹೇಳಿದ್ದಾರೆ.
ತನಿಖೆ ಆಗುವವರೆಗೂ ಪರೀಕ್ಷೆ ಮಾಡುವುದಿಲ್ಲ ಎನ್ನುವುದು ತಪ್ಪು ನೀತಿ. ನೀವು ಯುವಜನರಿಗೆ ಮೋಸ ಮಾಡುತ್ತಿದ್ದೀರಿ. ಇಡೀ ಪರೀಕ್ಷೆಯನ್ನೇ ರದ್ದುಗೊಳಿಸಿ ಹೊಸದಾಗಿ ಪರೀಕ್ಷೆಯನ್ನು ನಡೆಸಿ ಎಂದಿರುವ ಅವರು, ಸಿಐಡಿ ಒಳಗೆ ಹೋದ ಮೇಲೆ ಹೋಂ ಮಿನಿಸ್ಟರ್ ಮತ್ತು ಸಿಎಂ ಇನ್ವೆಸ್ಟಿಗೇಶನ್ ಆಫೀಸರ್ ಆಗುತ್ತಾರೆ. ಇದು ನ್ಯಾಯಾಂಗದಲ್ಲಿ ತನಿಖೆ ಆಗಬೇಕು ಎಂದು ನಾನು ಮೊದಲೇ ಆಗ್ರಹ ಮಾಡಿದ್ದೆ. ನ್ಯಾಯಾಂಗ ತನಿಖೆ ಆರಂಭ ಆದ 24 ಗಂಟೆಗಳಲ್ಲಿ ಅಮೃತ್ ಪೌಲ್ ಬಂಧನವಾಗಿದೆ