ಪ್ರಶ್ನೆ ಪತ್ರಿಕೆ ಸೋರಿಕೆ: ರಾಜ್ಯಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ

ಗುರುವಾರ, 31 ಮಾರ್ಚ್ 2016 (10:24 IST)
ಇಂದು ನಡೆಯಬೇಕಿದ್ದ ದ್ವೀತಿಯ ಪಿಯು ಮರುಪರೀಕ್ಷೆಯಲ್ಲಿ ಮತ್ತೆ ರಾಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವಿದ್ಯಾರ್ಥಿಗಳು ರಾಜ್ಯಾದ್ಯಂತ ಪಿಯು ಬೋರ್ಡ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

ಈ ಹಿಂದೆ ರಾಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರಿಂದ ಇಂದು ಮರುಪರೀಕ್ಷೆ ನಡೆಯಬೇಕಿತ್ತು. ಪ್ರಶ್ನೆ ಪತ್ರಿಕೆ ಹಂಚಿಕೆಯಲ್ಲಿ ಸರಕಾರದ ನಿರ್ಲಕ್ಷದಿಂದ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಈ ಕುರಿತು ಹೇಳಿಕೆ ನೀಡಿರುವ ಶಿಕ್ಷಣ ಸಚಿವ ಕಿಮ್ಮಣೆ ರತ್ನಾಕರ್, ಪ್ರಶ್ನೆ ಪತ್ರಿಕೆ ಸೋರಿಕೆ ಬಹು ದೊಡ್ಡ ಅನಾಹುತ, ಇದರ ನೈತಿಕ ಹೊಣೆ ಹೋರಲು ನಾನು ಸಿದ್ಧ, ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದೆ ಯಾರ ಕೈವಾಡವಿದೆ ಎಂದು ತಿಳಿಯಬೇಕಾಗಿದೆ ಎಂದು ಹೇಳಿದ್ದಾರೆ.
 
ಪಿಯ ಬೋರ್ಡ್ ನಿರ್ದೇಶಕಿ ಪಲ್ಲವಿ ಅಕುರಾತಿಯವರೆ ಪ್ರಶ್ನೆ ಪತ್ರಿಕೆ ಸೋರಿಕೆಗೆ ನೇರ ಹೊಣೆ. ಪರೀಕ್ಷೆ ನಡೆಸಲು ಕಷ್ಟವಾಗಿದ್ದರೆ ನಿರ್ದೇಶಕಿ ಪಲ್ಲವಿ ಮಾಹಿತಿ ನೀಡಬಹುದಿತ್ತು. ಪಲ್ಲವಿ ಕಾರ್ಯವೈಖರಿ ಕುರಿತಂತೆ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅಸಮಾಧಾನ ವ್ಯಕ್ತಪಡಿಸಿದರು. 
 

ವೆಬ್ದುನಿಯಾವನ್ನು ಓದಿ