ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಬುಧವಾರ, 28 ಸೆಪ್ಟಂಬರ್ 2016 (21:00 IST)
ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 18 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
 
ವಿರುದ್ಧ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪವನ್ನು ಈ 18 ಆರೋಪಿಗಳು ಎದುರಿಸುತ್ತಿದ್ದಾರೆ. 
 
ಒಂದನೇಯ ಎಸಿಎಂಎಂ ಕೋರ್ಟ್‌ಗೆ ಸಿಐಡಿ ಅಧಿಕಾರಿಗಳು ಚಾರ್ಜ್‌ಸೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್‌ಪಿನ್ ಶಿವಕುಮಾರಯ್ಯ, ಕಿರಣ ಅಲಿಯಾಸ್ ಕುಮಾರಸ್ವಾಮಿ ಸೇರಿದಂತೆ ಒಟ್ಟು 18 ಆರೋಪಿಗಳ ವಿರುದ್ಧ ಸಿಐಡಿ ಅಧಿಕಾರಿಗಳು ಕೋಕಾ ಕಾಯ್ದೆಯಡಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. 
 
ಎರ್ಮಲ್ಲಪ್ಪ, ಸಂತೋಷ ಅಗಸಿಮನಿ, ಮುರಳಿಧರ, ಮಂಜುನಾಥ್ ಎನ್, ನರೇಂದ್ರ, ಅನಿಲ್ ಕುಮಾರ್, ತಿಮ್ಮೇಗೌಡ, ನಾರಾಯಣ, ಒಬ್ಳರಾಜು, ಅನಿಲ್ ಕುಮಾರ್ ಬಿ, ರಂಗನಾಥ್, ರುದ್ರಪ್ಪ, ಗಂಗಾಭೈರವ್, ಸುಜಯ್ ಆರ್ಯ, ಸತೀಶ್ ಹಾಗೂ ಡಿ.ಸಿ.ಸಂತೋಷ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ