ಕಳೆದ ವರ್ಷದ ಫಲಿತಾಂಶಕ್ಕೆ ಹೋಲಿಸಿದರೆ, ಪ್ರಸಕ್ತ ಸಾಲಿನಲ್ಲಿ 3 ಪ್ರತಿಶತ ಕುಸಿತ ಕಂಡು 57.20 ಪ್ರತಿಶತ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ ಗಳಿಸಿದ್ದು, ಉಡುಪಿ ದ್ವಿತೀಯ ಹಾಗೂ ಕೊಡಗು ತೃತೀಯ ಸ್ಥಾನ ಪಡೆದಿದೆ. ಕಳೆದ ವರ್ಷದಂತೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.