ಬೆಂಗಳೂರು ನಗರವು ಕಳೆದ 2 ವಾರಗಳಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಒಟ್ಟಿಗೆ ಕಂಡುಬಂದರೆ ಅದನ್ನು ಕ್ಲಸ್ಟರ್ ಎಂದು ಗುರುತಿಸಲಾಗುತ್ತಿದೆ. ಜೊತೆಗೆ 100 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗುತ್ತದೆ. ಈ ಪೈಕಿ ಸಕ್ರಿಯ ಕೆಂಟೈನ್ಮೆಂಟ್ ವಲಯಗಳ ಸಂಖ್ಯೆ 160 ದಾಟಿದ್ದು,(09.08.2021 ರಂತೆ), ಅದರಲ್ಲಿ ಸುಮಾರು ಶೇ. 50 ರಷ್ಟು ಅಂದರೆ 79 ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ಗಳು ಕಂಟೈನ್ಮೆಂಟ್ ವಲಯಗಳಿವೆ. ಈ ಸಂಬಂಧ ಅಪಾರ್ಟ್ಮೆಂಟ್ ಗಳಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕಾಗುತ್ತದೆ ಪಾಲಿಕೆ ಹೊರಡಿಸಿರುವ ಮಾರ್ಗಸೂಚಿಯಲ್ಲಿನ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ