ಪಿಯುಸಿ ಪ್ರವೇಶ : ಅರ್ಜಿ ಆಹ್ವಾನಕ್ಕೆ ಸರಕಾರ ಸೂಚನೆ
ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ಪಿಯುಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಹೆಚ್ಚಳವಾಗಿದೆ.
ವಸತಿ ಕಾಲೇಜುಗಳ ಪ್ರವೇಶಕ್ಕೆ ಕೇಂದ್ರೀಕೃತ ಆನ್ ಲೈನ್ ಅರ್ಜಿ ಆಹ್ವಾನಿಸಿ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ.
ವಸತಿ ಕಾಲೇಜುಗಳ ಫಲಿತಾಂಶವು ರಾಜ್ಯದ ಒಟ್ಟಾರೆ ಪಿಯುಸಿ ಫಲಿತಾಂಶಕ್ಕಿಂತ ಶೇ. 25. ರಷ್ಟು ಹೆಚ್ಚಳವಾಗಿದೆ. ಪ್ರಥಮ ಪಿಯುಸಿ ಆರಂಭದಿಂದಲೇ ಸಿಇಟಿ/ ನೀಟ್/ಜೆಇಇ ಮತ್ತಿತರ ಪರೀಕ್ಷೆಗಳಿಗೆ ಡಿಜಿಟಲ್ ಆಧಾರಿತ ತರಬೇತಿ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.