ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆ : 80 ವಿದ್ಯಾರ್ಥಿನಿಯರಿಂದ ಪರೀಕ್ಷೆ ಬಹಿಷ್ಕಾರ
ಮಂಗಳವಾರ, 22 ಫೆಬ್ರವರಿ 2022 (19:08 IST)
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 80 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ.
ವಿಜಯಪುರ ಸರ್ಕಾರಿ ಪಿಯು ಕಾಲೇಜಿನ 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿಲ್ಲ.ಹಾವೇರಿಯ ಹಾನಗಲ್ ಕೆಎಲ್ ಇ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪ್ರಾಯೋಗಕ ಪರೀಕ್ಷೆಗೆ ಹಾಜರಾಗಿರಲಿಲ್ಲ.
ಬಳ್ಳಾರಿ, ತುಮಕೂರು, ಕಲಬುರಗಿ ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಬಿಚ್ಚಿಟ್ಟು ಪರೀಕ್ಷೆ ಬರೆದಿದ್ದಾರೆ.
ಜಾಬ್ ಧರಿಸಲು ಅವಕಾಶ ನೀಡುವಂತೆ ಕೋರ್ಟ್ ಗೆ ಮೊರೆ ಹೋಗಿದ್ದ ಆರು ವಿದ್ಯಾರ್ಥಿನಿಯರ ಪೈಕಿ ಮೂವರು ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರಾಗಿದ್ದಾರೆ.
ಯಾದಗಿರಿಯ ಒಂದು ಶಾಲೆಯಲ್ಲಿ 40 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಬರೆಯದೇ ಮನೆಗೆ ವಾಪಾಸಾಗಿದ್ದಾರೆ.