ಪಿಯುಸಿ ಪರೀಕ್ಷೆ ಮುಂದೂಡಿಕೆ : ಕೊರೊನಾ ಎಫೆಕ್ಟ್

ಭಾನುವಾರ, 22 ಮಾರ್ಚ್ 2020 (19:04 IST)
ಕೊರೊನಾ ಮಹಾಮಾರಿ ಎಫೆಕ್ಟ್ ನಿಂದಾಗಿ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.
 

ಇಂಗ್ಲೀಷ್ ಕೊನೆಯ ಪರೀಕ್ಷೆಗೆ ಪಿಯುಸಿ ವಿದ್ಯಾರ್ಥಿಗಳು ಸಜ್ಜಾಗಿದ್ದರು. ಆದರೆ ಕೊರೊನಾ ಭೀತಿಯಿಂದಾಗಿ ಮುಂಜಾಗ್ರತೆ ಕ್ರಮದ ಹಿನ್ನೆಲೆಯಲ್ಲಿ ಕೊನೆಯ ಪರೀಕ್ಷೆಯಾಗಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.

ಬಹುತೇಕ ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಅಲ್ಲದೇ ಬಸ್ ಸಂಚಾರ ಕೆಲವೆಡೆ ಸ್ಥಗಿತಗೊಂಡಿದೆ. ಇದರಿಂದಾಗಿ ಪರೀಕ್ಷಾ ಕೇಂದ್ರಗಳಿಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾಗುವುದನ್ನು ಮನಗಂಡು ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ