3,400 ಬೂತ್ ಗಳ ಮೂಲಕ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ

ಭಾನುವಾರ, 27 ಫೆಬ್ರವರಿ 2022 (20:22 IST)
ಬೆಂಗಳೂರು: 3,400 ಬೂತ್ ಗಳ ಮೂಲಕ ಪಲ್ಸ್ ಪೋಲಿಯೊ ಲಸಿಕೆ ಹಾಕಲಾಗುತ್ತದೆ. 10 ಲಕ್ಷ 84 ಸಾವಿರ ಮಕ್ಕಳು ನಗರದಲ್ಲಿದ್ದಾರೆ. ಮೊಬೈಲ್ ಮತ್ತು ಫಿಕ್ಸ್ ಬೂತ್ ಗಳಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.
 
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭಾನುವಾರ (ಫೆಬ್ರವರಿ 27) ದಿಂದ ಮಾರ್ಚ್ 02 ರವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ ಚಾಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
 
ಪಾಲಿಕೆ ಮುಖ್ಯ ಕಛೇರಿಯ ವ್ಯಾಪ್ತಿಯ ಸ್ಥಳೀಯ ಶಾಸಕ ಉದಯ್ ಗರುಡಾಚಾರ್, ಪಾಲಿಕೆ ಆಡಳಿತಗಾರ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ಗೌರವ್ ಗುಪ್ತ ಪಾಲಿಕೆ ಮುಖ್ಯ ಕಚೇರಿ ಬಳಿಯ ದಾಸಪ್ಪ ಆಸ್ಪತ್ರೆಯ ಆವರಣದಲ್ಲಿ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
 
ಈ ಸಂದರ್ಭದಲ್ಲಿ ಮಾತನಾಡಿದ ಗೌರವ್ ಗುಪ್ತ ರೈಲ್ವೆ ನಿಲ್ದಾಣ ಸೇರಿದಂತೆ ರಾಜಧಾನಿಯ ಹಲವೆಡೆ ಪೊಲಿಯೋ ಲಸಿಕೆ ಹಾಕಲಾಗುತ್ತದೆ. ನೋಡಲ್ ಆಫೀಸರ್ ಒಬ್ಬರನ್ನು ನೇಮಕ ಮಾಡಿ ಪಲ್ಸ್ ಪೊಲೀಯೊ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
 
ರೋಟರಿ ಕ್ಲಬ್ ಸಹಯೋಗ:
 
ರೋಟರಿ ಕ್ಲಬ್ ಸಹಯೋಗದಲ್ಲಿ ಲಸಿಕಾ ಕಾರ್ಯಕ್ರಮ ನಡೆಯುತ್ತದೆ.ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಲು ಲಸಿಕಾ ಕೇಂದ್ರದತ್ತ  ಪೋಷಕರು ಆಗಮಿಸಿದರು.
 
ಕಾರ್ಯಕ್ರಮದಲ್ಲಿ ವಿಶೇಷ ಆಯುಕ್ತ ಡಾ ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ ಬಾಲಸುಂದರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ