ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಿಗಲಿ

ಶನಿವಾರ, 30 ಅಕ್ಟೋಬರ್ 2021 (20:40 IST)
ಕನ್ನಡ ಚಿತ್ರರಂಗದ ಉತ್ತಮ ನಟ, ಸಜ್ಜನಿಕೆ ವ್ಯಕ್ತಿತ್ವ, ಸಮಾಜಮುಖಿ ಕಾರ್ಯ ಚಟುವಟಿಕೆ ಮೂಲಕ ಎಲ್ಲರಿಗೂ ಸ್ಫೂರ್ತಿಯಾಗಿದ್ದ ಪುನೀತ್ ರಾಜ್ ಕುಮಾರ್ ಅವರು ಮಾದರಿಯಾಗಿ ಬದುಕಿದ್ದರು. 
 
ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ತಾವೊಬ್ಬ ನಟರಾಗಿದ್ದರೂ ಸಹ ಅನೇಕ ಹೊಸಬರಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದರು.  ಅನಾಥಾಶ್ರಮ, ಹೆಣ್ಣು ಮಕ್ಕಳಿಗೆ ಶಿಕ್ಷಣ ಸೇರಿದಂತೆ ಇನ್ನಿತರ ಚಟುವಟಿಕೆಯನ್ನು  ಹಮ್ಮಿಕೊಂಡಿದ್ದರು. 
 
ಇದಲ್ಲದೆ ಕನ್ನಡ ಭಾಷೆ, ಸೇರಿದಂತೆ ಇನ್ನಿತರ ಹೋರಾಟದಲ್ಲಿ ಮುಂಚೂಣಿಯಾಗಿ, ಸಕ್ರಿಯರಾಗಿ ಭಾಗವಹಿಸುತ್ತಿದ್ದರು. ಕನ್ನಡ ಹಾಗೂ ಸ್ಥಳೀಯ ಸಂಸ್ಕೃತಿಗೆ ಒತ್ತನ್ನು ನೀಡುವ ಮೂಲಕ ಉತ್ತಮ ಚಿಂತನೆಯನ್ನು ಹೊಂದಿದ್ದರು. ಅಲ್ಲದೆ ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅತಿ ಕಿರಿಯ ವಯಸ್ಸಿಗೆ ಅವರು ಇನ್ನಿಲ್ಲ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅವರ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರ್ಕಾರವು ಈ ಸಾಲಿನ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಮರಣೋತ್ತರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕೆಂದು ಕೋರುತ್ತೇನೆ. ಜಗ್ಗೇಶ್ ಚಲನಚಿತ್ರ ನಟ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ