ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ : ದೇವನೂರ ಮಹಾದೇವ

ಮಂಗಳವಾರ, 25 ಏಪ್ರಿಲ್ 2023 (18:00 IST)
ಬೆಂಗಳೂರು : ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ. ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ ಅನ್ನೋದು ಮುಖ್ಯವಲ್ಲ. ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ದೇವನೂರ ಮಹಾದೇವ ಕಿಡಿಕಾರಿದರು.
 
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತದ ವಿರುದ್ಧ ಕೆಲ ಚಿಂತಕರು, ಸಾಹಿತಿಗಳು ಹಾಗೂ ಬುದ್ಧಿಜೀವಿಗಳು ಅಸಮಾಧಾನ ಹೊರಹಾಕಿದ್ದಾರೆ. ಚುನಾವಣೆ ಹೊತ್ತಿನಲ್ಲೇ ಇಂದು ಎದ್ದೇಳು ಕರ್ನಾಟಕ ಸಂಘವು ಸುದ್ದಿಗೋಷ್ಠಿ ನಡೆಸಿ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ.

ಈ ವೇಳೆ ಮಾತನಾಡಿದ ಸಾಹಿತಿ ದೇವನೂರ ಮಹಾದೇವ, ಮತದಾರರು ಹೆಚ್ಚು ಜಾಗೃತರಾಗಿದ್ದಾರೆ. ಇದುವರೆಗೆ ಇಷ್ಟು ಜಾಗೃತರಾಗಿರಲಿಲ್ಲ. ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ. ಡಬಲ್ ಎಂಜಿನ್ ಸರ್ಕಾರ ಅಂತಾ ಕೇಳಿ ಕೇಳಿ ಕಿವಿ ತೂತು ಆಗಿದೆ. ಡಬಲ್ ಎಂಜಿನ್ ಸರ್ಕಾರ ಅಂತಾ ಹೇಳಿ ಅಭಿವೃದ್ಧಿಯ ಬುಡ ಅಲ್ಲಾಡಿಸುತ್ತಾರೆ ಎಂದು ಗುಡುಗಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ