ಮಹಿಳೆಯೊಬ್ಬಳ ಮೇಲೆ ನಡೆದ ಅತ್ಯಾಚಾರ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರಿಗೂ ಇದೀಗ ಕ್ವಾರಂಟೈನ್ ಮಾಡಲಾಗಿದೆ.
ಶಿವಮೊಗ್ಗದಲ್ಲಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಕೊರೊನಾ ರಿಪೋರ್ಟ್ ಪಾಸಿಟಿವ್ ಆಗಿದೆ. ಸಂತ್ರಸ್ತೆ ಮತ್ತು ಆರೋಪಿ ಕರೆದುಕೊಂಡು ಹೋಗಿ ಮಹಜರು ಮಾಡಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಲಾಗುವುದು.
ಮಹಜರು ಮಾಡಲು ಹೋಗಿದ್ದ ಪೊಲೀಸ್ ಅಧಿಕಾರಿಯು ಪೊಲೀಸ್ ಇಲಾಖೆಯ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಭಾಗವಹಿಸಿದ್ದರಿಂದ ಡಿವೈಎಸ್ಪಿ ಸೇರಿದಂತೆ ಅಲ್ಲಿನ ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಇನ್ನು, ಹಾವೇರಿಯಲ್ಲಿ ಮುಂಬೈನಿಂದ ಬಂದ ಮೂವರು ಸೋಂಕು ತಂದ ಕಾರಣ ಹಸಿರು ವಲಯದಲ್ಲಿದ್ದ ಹಾವೇರಿ ಕಿತ್ತಳೆ ವಲಯವಾಯಿತು ಎಂದು ಹೇಳಿದ್ದಾರೆ.
ಹಾವೇರಿಯಲ್ಲಿ 1 ಕೋಟಿ ರೂಪಾಯಿ ವೆಚ್ಚದ ಕೋವಿಡ್ 19 ಪ್ರಯೋಗಾಲಯ ಪ್ರಾರಂಭಿಸುವ ಸಿವಿಲ್ ಕೆಲಸ ಪ್ರಗತಿಯಲ್ಲಿದೆ. ಜೂನ್ ಮೊದಲ ವಾರದಲ್ಲಿ ಪ್ರಯೋಗಾಲಯ ಕಾರ್ಯಾರಂಭ ಮಾಡುತ್ತದೆ ಎಂದು ಹೇಳಿದ್ದಾರೆ.