ಮಾದಕ ವ್ಯಸನಿಗಳ ಬಗ್ಗೆ ಬೆಚ್ಚಿ ಬೀಳಿಸುವ ವರದಿ ಕೊಟ್ಟ ಶಾಸಕ ಆರ್ ಅಶೋಕ್

ಶುಕ್ರವಾರ, 13 ಜುಲೈ 2018 (12:22 IST)
ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತೊಂದು ಉಡ್ತಾ ಪಂಜಾಬ್ ಆಗುತ್ತಿದೆಯೇ? ಇಂದು ವಿಧಾನಸಭೆ ಕಲಾಪದಲ್ಲಿ ಬಿಜೆಪಿ ಶಾಸಕ ಆರ್ ಅಶೋಕ್ ನೀಡಿರುವ ವರದಿ ನೋಡಿದರೆ ನಿಜಕ್ಕೂ ಶಾಕ್ ಆಗುವಂತಿದೆ.

ಬೆಂಗಳೂರಿನಲ್ಲಿ 18 ರಿಂದ 30 ವರ್ಷ ವಯಸ್ಸಿನ ಯುವ ಸಮೂಹ ಡ್ರಗ್ಸ್ ದಾಸರಾಗುತ್ತಿದ್ದಾರೆ. ಶಾಂತಿನಗರ ಮುಂತಾದ ಪ್ರತಿಷ್ಠಿತ ಪ್ರದೇಶಗಳಲ್ಲೇ ಮಾದಕ ವಸ್ತು ಹೇರಳವಾಗಿ ಓಡಾಡುತ್ತಿದೆ ಎಂದು ಅವರು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಸದ್ಯಕ್ಕೆ ರಾಜ್ಯದಲ್ಲಿ ಸುಮಾರು 5 ಲಕ್ಷ ಯುವ ಜನಾಂಗ ಮಾದಕ ವಸ್ತುಗಳಿಗೆ ದಾಸರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸ್ಪೀಕರ್ ರಮೇಶ್ ಕುಮಾರ್, ಇದೆಲ್ಲಾ ಪ್ರತಿಷ್ಠಿತ ಶಾಲೆ, ಕಾಲೇಜುಗಳಲ್ಲಿ, ಅಪ್ಪ ಅಮ್ಮನ ಬಿಟ್ಟಿ ದುಡ್ಡು ಸಿಗುವ ಮಕ್ಕಳಲ್ಲಿ ಬರುತ್ತಿದೆ. ಸರ್ಕಾರ ಶಾಲೆಗೆ ಹೋಗುವ ಮಕ್ಕಳಿಗೆ ಪುಸ್ತಕಕ್ಕೇ ದುಡ್ಡು ಸಿಗಲ್ಲ ಎಂದರು.  ಅಲ್ಲದೆ, ಈ ವ್ಯಸನವನ್ನು ತಡೆಗಟ್ಟಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ