ಕಾಂಗ್ರೆಸ್ ಸರ್ಕಾರದ ಆತ್ಮಹತ್ಯಾ ಭಾಗ್ಯಕ್ಕೆ ಇನ್ನೆಷ್ಟು ಬಲಿಯಾಗಬೇಕು: ಆರ್ ಅಶೋಕ್ ಆಕ್ರೋಶ

Krishnaveni K

ಶುಕ್ರವಾರ, 17 ಅಕ್ಟೋಬರ್ 2025 (16:48 IST)
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆತ್ಮಹತ್ಯಾ ಭಾಗ್ಯಕ್ಕೆ ಇನ್ನೆಷ್ಟು ಜನ ಬಲಿಯಾಗಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

27 ತಿಂಗಳಿನಿಂದ ಸಂಬಳವಿಲ್ಲದೇ ಗ್ರಾಮ ಪಂಚಾಯತಿ ಮುಂದೆಯೇ ವಾಟರ್ ಮ್ಯಾನ್ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಪ್ರತಿಕ್ರಿಯಿಸಿರುವ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈತನ ಆತ್ಮಹತ್ಯೆ ಪತ್ರದಲ್ಲಿ ಪ್ರಭಾವೀ ವ್ಯಕ್ತಿಗಳ ಹೆಸರೂ ಉಲ್ಲೇಖವಾಗಿದೆ.

‘ಕಾಂಗ್ರೆಸ್ ಸರ್ಕಾರದ ಆತ್ಮಹತ್ಯೆ ಭಾಗ್ಯಕ್ಕೆ ಮತ್ತೊಬ್ಬ ಸರ್ಕಾರಿ ನೌಕರ ಬಲಿಯಾಗಿದ್ದಾನೆ. ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಎರಡು ವರ್ಷಗಳಿಂದ ಸಂಬಳ ಸಿಗದೆ ಬೇಸತ್ತಿದ್ದ ವಾಟರ್ಮ್ಯಾನ್ ಚಿಕ್ಕಸು ನಾಯಕ ಅವರು ಗ್ರಾ.ಪಂ. ಕಚೇರಿ ಬಾಗಿಲು ಬಳಿ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ನಡೆದಿದೆ.

ಎರಡು ದಿನಗಳ ಹಿಂದಷ್ಟೇ ಕಲಬುರ್ಗಿಯಲ್ಲಿ ಸಂಬಳ ಸಿಗದೆ ಗ್ರಂಥಪಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆಯ ಆಘಾತದಿಂದ ಹೊರಬರುವ ಮುನ್ನವೇ ಈಗ ಕಾಂಗ್ರೆಸ್  ಸರ್ಕಾರದ ದಿವಾಳಿತನಕ್ಕೆ ಮತ್ತೊಂದು ಬಲಿಯಾಗಿದೆ.

ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರೇ, ತಿಂಗಳಿಗೆ ಕೇವಲ 5,000 ರೂಪಾಯಿ ಸಂಬಳ ಪಡೆಯುವ ಒಬ್ಬ ಬಡ ವ್ಯಕ್ತಿಗೆ 2 ವರ್ಷದಿಂದ ಸಂಬಳ ಕೊಡದೇ ಸಾಯಿಸಿಬಿಟ್ಟರಲ್ಲ ಸ್ವಾಮಿ, ನಿಮ್ಮ ಸರ್ಕಾರಕ್ಕೆ ಹೃದಯ ಅನ್ನೋದೇ ಇಲ್ಲವಾ? ಮನುಷ್ಯತ್ವ ಅನ್ನೋದೇ ಇಲ್ಲವಾ? ನಿಮ್ಮ ದುರಾಡಳಿತಕ್ಕೆ ಇನ್ನೆಷ್ಟು ಅಮಾಯಕ ಸರ್ಕಾರಿ ನೌಕರರು, ಗುತ್ತಿಗೆದಾರರು ಬಲಿಯಾಗಬೇಕು?’ ಎಂದು ಪ್ರಶ್ನಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ