ಕರ್ನಾಟಕದಲ್ಲಿ ಸಿಎಂ ಬದಲಾವಣೆ ದಿನಾಂಕವನ್ನೂ ತಿಳಿಸಿ ಅಚ್ಚರಿ ಮೂಡಿಸಿದ ಆರ್ ಅಶೋಕ್

Krishnaveni K

ಭಾನುವಾರ, 2 ಫೆಬ್ರವರಿ 2025 (09:34 IST)
ಬೆಂಗಳೂರು: ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಒಂದೆಡೆ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೆ ಇತ್ತ ಬಿಜೆಪಿ ನಾಯಕ ಆರ್ ಅಶೋಕ್ ಸಿಎಂ ಬದಲಾವಣೆಯ ದಿನಾಂಕವನ್ನೂ ಹೇಳಿ ಅಚ್ಚರಿ ಮೂಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಬದಲಾವಣೆಗೆ ಕಾಂಗ್ರೆಸ್ ನಾಯಕರಲ್ಲೇ ಕೆಲವು ನಾಯಕರಿಗೆ ಒಲವಿದೆ. ಆದರೆ ಇನ್ನು ಕೆಲವರು ಸಿದ್ದರಾಮಯ್ಯನವರೇ ಸಿಎಂ ಆಗಿ ಐದು ವರ್ಷ ಪೂರೈಸಲಿ ಎನ್ನುತ್ತಿದ್ದಾರೆ. ಇದೇ ವಿಚಾರವಾಗಿ ಕಾಂಗ್ರೆಸ್ ಈಗ ಬೂದಿ ಮುಚ್ಚಿದ ಕೆಂಡದಂತಿದೆ. ಇತ್ತ ಹೈಕಮಾಂಡ್ ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದು ಎಂದು ಖಡಕ್ ವಾರ್ನಿಂಗ್ ಕೊಟ್ಟಿದೆ.

ಈ ನಡುವೆ ಆರ್ ಅಶೋಕ್ ನವಂಬರ್ 15,16 ಕ್ಕೆ ಸಿಎಂ ಬದಲಾವಣೆ ಖಚಿತ ಎಂದಿದ್ದಾರೆ. ಕಾಂಗ್ರೆಸ್ ಸ್ನೇಹಿತರೇ ಈ ವಿಚಾರ ಹೇಳಿದ್ದಾರೆ ಎಂದು ಹೊಸ ಬಾಂಬ್ ಹಾಕಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಭಾಗಿಯಾದ ಅವರು ಈ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ