15 ದಿನದಲ್ಲಿ ಬಿಜೆಪಿ ಪ್ರಾಬ್ಲಂ ಎಲ್ಲಾ ಪರಿಹಾರ: ಆರ್ ಅಶೋಕ್

Krishnaveni K

ಬುಧವಾರ, 5 ಫೆಬ್ರವರಿ 2025 (10:56 IST)
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ರಾಜ್ಯಾಧ್ಯಕ್ಷ ಪಟ್ಟರ ಬದಲಾವಣೆ ಗೊಂದಲಗಳಿಗೆ 15 ದಿನದಲ್ಲಿ ಪರಿಹಾರ ಸಿಗಲಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಬಿಜೆಪಿ ಈಗ ಒಡೆದ ಮನೆಯಾಗಿದೆ. ಒಂದೆಡೆ ಬಿವೈ ವಿಜಯೇಂದ್ರ ಗುಂಪು, ಇನ್ನೊಂದೆಡೆ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮತ್ತೊಂದು ಗುಂಪು ತಟಸ್ಥವಾಗಿದೆ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕಿತ್ತೊಗೆಯಲೇಬೇಕು ಎಂದು ಯತ್ನಾಳ್ ಬಣ ಪಟ್ಟು ಹಿಡಿದಿದೆ.


ಇದಕ್ಕಾಗಿ ಯತ್ನಾಳ್ ಹೈಕಮಾಂಡ್ ಗೆ ಗಡುವನ್ನೂ ನೀಡಿದ್ದಾರೆ. ನಂತರವೂ ವಿಜಯೇಂದ್ರರನ್ನು ಬದಲಾಯಿಸದೇ ಇದ್ದರೆ ನಮ್ಮ ದಾರಿ ನಾವು ನೋಡಿಕೊಳ್ಳುತ್ತೇವೆ ಎಂದು ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ರಾಜ್ಯ ಬಿಜೆಪಿ ಗೊಂದಲಗಳ ಬಗ್ಗೆ ಪ್ರತಿಕ್ರಿಯಿಸಿರುವ ಆರ್ ಅಶೋಕ್, ಎಲ್ಲಾ ಸಮಸ್ಯೆಗಳನ್ನೂ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ. ಅವರು ಎಲ್ಲವನ್ನೂ ಗಮನಿಸಿದ್ದಾರೆ. 15 ದಿನದಲ್ಲಿ ನಮ್ಮ ಎಲ್ಲಾ ಸಮಸ್ಯೆಗಳೂ ಪರಿಹಾರವಾಗುತ್ತದೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ