ಕನ್ನಡ ಚಿತ್ರರಂಗದ ಹಿರಿಯ ನಟಿ, ನಟ ವಿನೋದ್ ರಾಜ್ ಅವರ ತಾಯಿ, ಲೀಲಾವತಿ ಅವರ ನಿಧನದಿಂದಾಗಿ ಕನ್ನಡ ಚಿತ್ರರಂಗ ಅಮೂಲ್ಯ ರತ್ನವೊಂದನ್ನು ಕಳೆದುಕೊಂಡಂತಾಗಿದೆ.
ಲೀಲಾವತಿ ಅವರು ಸುಮಾರು 600 ಕ್ಕೂ ಅಧಿಕ ಬೇರೆ ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸುವ ಮೂಲಕ ಬಹುಭಾಷಾ ತಾರೆ ಎನಿಸಿಕೊಂಡಿದ್ದರು. ಹಲವಾರು ಸಾಮಾಜಿಕ ಕಾರ್ಯ ಮಾಡುವ ಮೂಲಕ ಎಲ್ಲರಿಗೂ ಆದರ್ಶಪ್ರಾಯರಾಗಿದ್ದರು. ಅವರ ನಿಧನದಿಂದ ಕನ್ನಡ ಸಿನಿಲೋಕಕ್ಕೆ ಅಪಾರ ನಷ್ಟವಾಗಿದೆ.
ಲೀಲಾವತಿ ಅವರ ಕುಟುಂಬ, ಅಭಿಮಾನಿಗಳಿಗೆ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಆರ್ ಅಶೋಕ್ ಸಂತಾಪ ಸೂಚಿಸಿದ್ದಾರೆ.