ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

Krishnaveni K

ಸೋಮವಾರ, 28 ಜುಲೈ 2025 (16:06 IST)

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಕಳೆದೊಂದು ವರ್ಷದಲ್ಲಿ 981 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಕಿ ಅಂಶ ಉಲ್ಲೇಖಿಸಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಂದೆಡೆ ಇಂದಿನಿಂದ ಬಿಜೆಪಿ ರೈತರ ಪರವಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಇನ್ನೊಂದೆಡೆ ಸೋಷಿಯಲ್ ಮೀಡಿಯಾದಲ್ಲಿ ಸರ್ಕಾರದ ವಿರುದ್ಧ ಅಶೋಕ್ ಕಿಡಿಕಾರಿದ್ದಾರೆ.

ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿದ್ದರಾಮಯ್ಯ ಸರ್ಕಾರ. ರೈತ ಹಂತಕ ಕಾಂಗ್ರೆಸ್ ಸರ್ಕಾರದ ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದ 981 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಾಂಗ್ರೆಸ್‌ನ ರೈತ ವಿರೋಧಿ ನೀತಿಯ ಜ್ವಲಂತ ನಿದರ್ಶನ.

 

ಪರಿಹರಕ್ಕಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಅವಹೇಳನ ಮಾಡುತ್ತಾ, ರೈತರಿಗೆ ಸಿಗಬೇಕಾದ ಪರಿಹಾರ ಕೊಡದೇ ಮೀನಮೇಷ ಎಣಿಸುತ್ತಾ ಕಾಲಹರಣ ಮಾಡುತ್ತಾ ಬಂದಿರುವ ಕಾಂಗ್ರೆಸ್ ಸರ್ಕಾರ 138 ಮೃತ ರೈತರ ಕುಟುಂಬಗಳಿಗೆ ಪರಿಹಾರ ತಿರಸ್ಕಾರ ಮಾಡಿದೆ. ಅನ್ನದಾತರ ಶಾಪ ಈ ಸರ್ಕಾರಕ್ಕೆ ತಟ್ಟದೇ ಇರದು ಎಂದಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ