ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆನಾ: ಆರ್ ಅಶೋಕ್ ವಾಗ್ದಾಳಿ

Krishnaveni K

ಬುಧವಾರ, 16 ಜುಲೈ 2025 (12:07 IST)
ಬೆಂಗಳೂರು: ರಾಜ್ಯದಲ್ಲೇ ಬೀಡುಬಿಟ್ಟು ಸಚಿವರು, ಶಾಸಕರ ಜೊತೆ ಸಭೆ ಮೇಲೆ ಸಭೆ ನಡೆಸುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದು, ಸಚಿವ ಸಂಪುಟ ಸಭೆಗೂ ಸುರ್ಜೇವಾಲನೇ ಅಧ್ಯಕ್ಷತೆ ವಹಿಸ್ತಾರಾ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಕಿಡಿ ಕಾರಿರುವ ಅವರು ‘ಲಾಟರಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ''ರಣದೀಪ್ " ಆಡಳಿತ ಹೇರಿದೆ.

ಕೆಪಿಸಿಸಿ ಕಚೇರಿಯಲ್ಲಿ, ಪಂಚತಾರಾ ಹೋಟೆಲ್  ಗಳಲ್ಲಿ ಅತೃಪ್ತ ಶಾಸಕಾರ ದೂರು-ದುಮ್ಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ರಣದೀಪ್ ಸುರ್ಜೇವಾಲ ಅವರು, ಗುರುವಾರ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ’ ಎಂದಿದ್ದಾರೆ.

‘ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ  ಹಿಡಿತವಿಲ್ಲ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ, ತಮಗೆ ಬೇಕಾದವರನ್ನು ಸಿಎಂ ಆಗಿ ನೇಮಕ ಮಾಡಲು ರಾಹುಲ್ ಗಾಂಧಿ ಅವರಿಗೆ ಶಕ್ತಿ ಇಲ್ಲ.

ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನವನ್ನ ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೆ ಕಾಂಗ್ರೆಸ್ ಹೈಕಮಾಂಡ್ ತ್ರಿಶಂಕು ಸ್ಥಿತಿಯಲ್ಲಿದೆ’ ಎಂದು ವ್ಯಂಗ್ಯ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ