ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಗ್ಯಾರಂಟಿಯಿಲ್ಲ: ಆರ್ ಅಶೋಕ್

Krishnaveni K

ಮಂಗಳವಾರ, 15 ಜುಲೈ 2025 (11:46 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳಿಂದಾಗಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯೇ ಗ್ಯಾರಂಟಿಯಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ರಾಜ್ಯದಲ್ಲಿ ಹೆಣ್ಣು ಮಕ್ಕಳು, ಅಪ್ರಾಪ್ತರ ಮೇಲಿನ ದೌರ್ಜನ್ಯ ಗಣನೀಯವಾಗಿ ಏರಿಕೆಯಾಗಿದೆ ಎಂಬ ವರದಿಗಳನ್ನು ಉಲ್ಲೇಖಿಸಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆಲ್ಲಾ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಯೇ ಕಾರಣ ಎಂದಿದ್ದಾರೆ.

‘ಕಳೆದ 4 ತಿಂಗಳಲ್ಲಿ ರಾಜ್ಯದಲ್ಲಿ ಮಹಿಳೆಯರು, ಹೆಣ್ಣುಮಕ್ಕಳ ಮೇಲೆ 1,369 ಲೈಂಗಿಕ ದೌರ್ಜನ್ಯ ಪ್ರಕರಣಗಳು ವರದಿಯಾಗಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಜ್ವಲಂತ ನಿದರ್ಶನವಾಗಿದೆ.

ಭಯೋತ್ಪಾದಕರು, ಅತ್ಯಾಚಾರಿಗಳು, ಮತಾಂಧ ಜಿಹಾದಿಗಳನ್ನು ಬ್ರದರ್ಸ್ ಎನ್ನುವ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟ ತಪ್ಪಿಗೆ ಇಂದು ಹಿಂದೂ ಯುವತಿಯರು ಕೇರಳ ಫೈಲ್ಸ್ ಮಾದರಿಯಲ್ಲಿ ಬಲಿಯಾಗುತ್ತಿದ್ದಾರೆ.

ಪದೇ ಪದೇ ನಡೆಯುತ್ತಿರುವ ಅಮಾನವೀಯ ಘಟನೆಗಳು ಕನ್ನಡಿಗರನ್ನು ತಲೆ ತಗ್ಗಿಸುವಂತೆ ಮಾಡಿದೆ. ಕೂಡಲೇ ಸಿದ್ದರಾಮಯ್ಯ ಅವರು ಹಾಗೂ ಡಾ ಜಿ ಪರಮೇಶ್ವರ್ ಅವರು ಅತ್ಯಾಚಾರಿಗಳನ್ನು ಹತ್ತಿಕ್ಕದೆ ಹೋದರೆ, ಮಹಿಳೆಯರು, ಹೆಣ್ಣು ಮಕ್ಕಳ ಶಾಪ ಈ ಸರ್ಕಾರಕ್ಕೆ ತಟ್ಟುವುದು ಶತಸಿದ್ಧ’  ಎಂದು ಅಶೋಕ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ